ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತದ ಪ್ರಜಾಪ್ರಭುತ್ವವನ್ನು ಟೀಕಿಸಿದಕ್ಕಾಗಿ ಅವರು ವ್ಯಂಗ್ಯವಾಗಿ ಮಾತನಾಡಿದ್ದಾರೆ.
‘ಇಂಡಿಯಾ ಟುಡೇ ಕಾನ್‌ಕ್ಲೇವ್’ನಲ್ಲಿ ಮಾತನಾಡಿದ ಮೋದಿ, ಭಾರತದ ಪ್ರಜಾಪ್ರಭುತ್ವದ ಯಶಸ್ಸು ಕೆಲವರಿಗೆ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯನ್ನು ಟೀಕಿಸಿದ್ದಕ್ಕಾಗಿ ಮೋದಿ ಅವರು “ಇಂಡಿಯಾ ಟುಡೇ ಕಾನ್‌ಕ್ಲೇವ್”ನಲ್ಲಿ ವ್ಯಂಗ್ಯವಾಗಿ ಮಾತನಾಡಿದ್ದಾರೆ. ದೇಶದ ಜನರು ಆತ್ಮವಿಶ್ವಾಸ ಮತ್ತು ಸಂಕಲ್ಪದಿಂದ ತುಂಬಿರುವಾಗ ಮತ್ತು ವಿಶ್ವದ ಬುದ್ಧಿಜೀವಿಗಳು ಭಾರತದ ಬಗ್ಗೆ ಆಶಾವಾದಿಯಾಗಿರುವಾಗ, ಅನಗತ್ಯವಾದ ವಿಷಯದ ಬಗ್ಗೆ ಮಾತನಾಡುತ್ತಾರೆ. ದೇಶದ ನೈತಿಕತೆಯನ್ನು ಘಾಸಿಗೊಳಿಸುತ್ತಾರೆ, ಹಾಗೂ ದೇಶವನ್ನು ಕೆಟ್ಟದಾಗಿ ತೋರಿಸುತ್ತಾರೆ ಎಂದಿದ್ದಾರೆ.

ಭಾರತದ ಪ್ರಜಾಪ್ರಭುತ್ವ ಮತ್ತು ಅದರ ಯಶಸ್ಸು ಕೆಲವರಿಗೆ ಘಾಸಿ ಉಂಟುಮಾಡುತ್ತದೆ, ಇಂತಹ ಮಾತುಗಳಿಂದ ದೇಶವು ತನ್ನ ಗುರಿಗಳನ್ನು ಈಡೇರಿಸಿಕೊಳ್ಳುವತ್ತ ಧೈರ್ಯದಿಂದ ಮುನ್ನುಗ್ಗಲಿದೆ ಎಂಬ ವಿಶ್ವಾಸವಿದೆ ಎಂದು ಮೋದಿ ಹೇಳಿದರು. ದೇಶ ಅತ್ಯಂತ ಆತ್ಮವಿಶ್ವಾಸದಲ್ಲಿ ಇರುವ ಸಂದರ್ಭದಲ್ಲಿ, ಇಡೀ ವಿಶ್ವದ ಬೌದ್ಧಿಕ ಸಮುದಾಯ ಭಾರತದ ಬಗ್ಗೆ ಆಶಾಭಾವನೆ ಹೊಂದಿರುವಾಗ ನಿರಾಶವಾದದ ಬಗ್ಗೆ ಮಾತನಾಡುವುದು ದೇಶದ ಮನೋಬಲವನ್ನು ಕುಗ್ಗಿಸುವಂಥ ಕೆಲಸಗಳು ನಡೆಯುತ್ತಿವೆದೆ ಎಂದು ನರೇಂದ್ರ ಮೋದಿಯವರು ವ್ಯಂಗ್ಯವಾಗಿ ಮಾತನಾಡಿದ್ದಾರೆ.